ಮುಖ್ಯ ಮಂತ್ರಿಗಳೇ ಅವರನ್ನು ವಜಾ ಮಾಡಿ :ಯತ್ನಾಳ್‌

ಬೆಂಗಳೂರು:

   ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

    ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತಮ್ಮ ಸ್ಥಾನವನ್ನು ದುರಪಯೋಗಪಡಿಸಿಕೊಂಡು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರನ್ನು ಬಿಟ್ಟಿರುವ ಶಾಸಕರು ತಮ್ಮ ಪ್ರಭಾವ ಬಳಸಿ ತನಿಖೆಯನ್ನು ದಿಕ್ಕನ್ನು ಬದಲಿಸುವ ಸಾಧ್ಯತೆಗಳು ಹೆಚ್ಚಿರುವದರಿಂದ ಕೂಡಲೇ ರಾಜೀನಾಮೆ ಕೊಡಬೇಕು ಇಲ್ಲದಿದ್ದರೆ ಮುಖ್ಯ ಮಂತ್ರಿಗಳೇ ಅವರನ್ನು ವಜಾ ಮಾಡಿ ನೈತಿಕ ಮೇಲ್ಪಂಕ್ತಿ ಹಾಕಿಕೊಡಬೇಕು ಎಂದಿದ್ದಾರೆ.

Recent Articles

spot_img

Related Stories

Share via
Copy link