ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತ್ತಾ: 

    ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

   ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ 24 ಗಂಟೆ ತೀವ್ರ ನಿಗಾ ವಹಿಸಿದ್ದಾರೆ” ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್‌ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದು,

    ಅವರು 2017 ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದಾಗ್ಯೂ, ಅವರು ನಂತರ ಟಿಎಂಸಿಗೆ ಮರಳಿದರು.

Recent Articles

spot_img

Related Stories

Share via
Copy link