ಮಹಾರಾಷ್ಟ್ರ
ರಾಜಧಾನಿ ಮುಂಬೈನ ಕೆರೆಯೊಂದರಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ಗೆಳೆಯನೇ ಕೊಂದು ಕೆರೆಗೆ ಎಸೆದಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಬುಧವಾರ ಸಂಜೆ 4.30ರ ಸುಮಾರಿಗೆ ಬೇಲಾಪುರ ಸಮೀಪದ ಶಾಲೆಯೊಂದರ ಬಳಿಯ ಕೆರೆಯಲ್ಲಿ ಶವ ಇರುವುದನ್ನು ಮೀನುಗಾರರು ನೋಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇವರಿಬ್ಬರ ನಡುವೆ ಜಗಳ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ನಂತರ ವ್ಯಕ್ತಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ಶವವನ್ನು ಕೆರೆಗೆ ಎಸೆದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.ಇದೀಗ ವ್ಯಕ್ತಿಯ ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಶವಪರೀಕ್ಷೆ ವರದಿ ಬಂದ ನಂತರ ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.