ಮುನಿರತ್ನ ಜಾಮೀನು ಅರ್ಜಿ : ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು

   ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ​ ಇಂದು (ಸೆ.18) ಬೆಂಗಳೂರಿನ ವಿಶೇಷ ನ್ಯಾಯಾಲಯವು, ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ಈ ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

   ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) r,s ಸೆಕ್ಷನ್ ಅನ್ವಯಿಸುವುದಿಲ್ಲವೆಂದು ಎಸ್ ಪಿಪಿ ಒಪ್ಪಿಕೊಂಡಿದ್ದಾರೆ. 3 (1) u ಅಡಿಯೂ ದೂರಿನಲ್ಲಿನ ಆರೋಪ ಅನ್ವಯವಾಗುವುದಿಲ್ಲ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ (ಸೆ.19) ಆದೇಶ ಕಾಯ್ದಿರಿಸಿದ್ದಾರೆ.

   ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮೊದಲ ಎಫ್‌ಐಆರ್​ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Recent Articles

spot_img

Related Stories

Share via
Copy link