ಬೆಂಗಳೂರು:
ಬಿಜೆಪಿ ಶಾಸಕ ಮುನಿರತ್ನ ಅವರು ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪದ ಮೇಲೆ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಕೊಳೆಗೇರಿಯಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ದೂರು ನೀಡಲಾಗಿದೆ.
