ಬೆಂಗಳೂರು
ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರು ತಮ್ಮ ಬೆಂಬಲಿಗರನ್ನೇ ಪಕ್ಷೇತರವಾಗಿ ಕಣಕ್ಕಿಳಿಸಿದ್ದಾರೆ. ಆ ಪಕ್ಷೇತರ ಅಭ್ಯರ್ಥಿ ಪಾಕಿಸ್ತಾನದ ಬಾವುಟ ಇರುವ ಕರಪತ್ರವನ್ನು ಕ್ಷೇತ್ರದ ತುಂಬೆಲ್ಲ ಹಂಚಿದ್ದಾರೆ. ಹೀಗೆ ಆರೋಪಿಸಿರುವ ಕುಸುಮಾ ಅವರು ಕರಪತ್ರ ಮತ್ತು ಪಕ್ಷೇತರ ಅಭ್ಯರ್ಥಿ ಫೋಟೊಗಳನ್ನು ತಮ್ಮ ಫೆಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಿಜೆಪಿ ಮುನಿರತ್ನ ಅವರು ತಮ್ಮ ಬೆಂಬಲಿಗನನ್ನೇ ಪಕ್ಷೇತರವಾಗಿ ಕಣಕ್ಕಿಳಿಸಿ ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ. ಆ ಪಕ್ಷೇತರ ಅಭ್ಯರ್ಥಿ ತಾನು ಕಾಂಗ್ರೆಸ್ ಬೆಂಬಲಿಗ ಎಂದು ಹೇಳಿಕೊಂಡು ಪಾಕಿಸ್ತಾನದ ಬಾವುಟ ಇರುವ ಕರಪತ್ರ ಹಂಚಿದ್ದಾರೆ ಎಂದು ಕುಸುಮಾ ಆರೋಪಿಸಿದ್ದಾರೆ. ಅಲ್ಲದೇ ಈ ಸಂಬಂದ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ.
ಸಾರ್ವಜನಿಕರ ಗಮನಕ್ಕೆ, ‘ಪಕ್ಷೇತರ ಅಭ್ಯರ್ಥಿಯಾದ ಆರಿಫ್ ಪಾಷಾ ಅಲಿಯಾಸ್ ಯಾರಬ್ ಎಂಬುವವರು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೊತೆಗೂಡಿ ಪಾಕಿಸ್ತಾನದ ಹೆಸರಿನಲ್ಲಿ ನಕಲಿಯಾಗಿ ನನಗೆ ಬೆಂಬಲ ಸೂಚಿಸುವುದಾಗಿ ಘೋಷಣೆ ಮಾಡುವ ಷಡ್ಯಂತ್ರ ರೂಪಿಸಿರುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಕ್ಷೇತ್ರದಲ್ಲಿ ಪದೇ ಪದೇ ಶಾಂತಿ-ಸುವ್ಯವಸ್ಥೆಯನ್ನು ಕದಡಿ ಕೋಮುಗಲಭೆ ಸೃಷ್ಟಿಸಲೆತ್ನಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಛೇಲಾಗಳ ವಿರುದ್ಧ ಚುನಾವಣಾ ಆಯೋಗ ಹಾಗೂ ಪೋಲಿಸ್ ಇಲಾಖೆಗೆ ನಾಳೆ ದೂರು ಸಲ್ಲಿಸುತ್ತಿದ್ದೇನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ