ಮುನಿರತ್ನಾಗೆ ಜಾಮೀನು ಮಂಜೂರು…!

ಬೆಂಗಳೂರು

    ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಇಂದು (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

   ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ಪರಪ್ಪನ ಅಗ್ರಹಾರದ ಬಳಿ ಅತ್ಯಾಚಾರ ಕೇಸ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

    ಐಪಿಸಿ ಸೆಕ್ಷನ್ 354A, 354C, 376, 506, 504, 120(b), 149, 384, 406, 308 ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಹೊರತುಪಡಿಸಿ, ಇತರ ಆರು ವ್ಯಕ್ತಿಗಳ ವಿರುದ್ಧ ಆರೋಪ ಮಾಡಲಾಗಿತ್ತು. ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಸೇರಿದಂತೆ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link