ಮದುವೆ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಸಾವು

ಬುಲಂದ್‌ಶಹರ್: 

   ಉತ್ತರ ಪ್ರದೇಶದ ಬುಲಂದ್‌ಶಹರ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜೋಶ್ ತುಂಬಲು ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಚೋಳ ಪ್ರದೇಶದ ಖಾನ್ಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

   ಕಾರ್ಯಕ್ರಮದ ಸಮಯದಲ್ಲಿ, ಆರೋಪಿ ಸುಗ್ರೀವ್ ಪರವಾನಗಿ ಪಡೆದ ಪಿಸ್ತೂಲ್ ಬಳಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅದು ಧರ್ಮೇಂದ್ರ ಭಾಟಿ(36) ಅವರಿಗೆ ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮೇಂದ್ರ ಅವರನ್ನು ತಕ್ಷಣ ನೋಯ್ಡಾದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

    ಸಂತ್ರಸ್ತರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಶಂಕರ್ ಪ್ರಸಾದ್ ತಿಳಿಸಿದ್ದಾರೆ.ಆರೋಪಿಗಳನ್ನು ಬಂಧಿಸಲು ಮತ್ತು ಘಟನೆಯಲ್ಲಿ ಬಳಸಲಾದ ಪರವಾನಗಿ ಪಡೆದ ಬಂದೂಕನ್ನು ವಶಪಡಿಸಿಕೊಳ್ಳಲು ಪೊಲೀಸ್ ತಂಡ ನಿಯೋಜಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ಹೇಳಿದ್ದಾರೆ.

Recent Articles

spot_img

Related Stories

Share via
Copy link