ಹುಬ್ಬಳ್ಳಿ :ಹಬ್ಬದಂದೇ ಝಳಪಿಸಿದ ಲಾಂಗು ಮಚ್ಚು ಗಳು

ಹುಬ್ಬಳ್ಳಿ:

     ಹಳೇ ದ್ವೇಷ, ಹಣಕಾಸಿನ ವ್ಯವಹಾರದ ಸಂಬಂಧ ಮಹಾನವಮಿ ಹಬ್ಬದ ದಿನವೇ ಯುವಕನ ಮೇಲೆ ಆತನ ಸ್ನೇಹಿತರೇ ಚಾಕುವಿನಿಂದ ಸಿಕ್ಕ ಸಿಕ್ಕಲ್ಲಿ ಇರಿದು ಕೊಲೆಗೈದ ಘಟನೆ ಗೋಪನಕೊಪ್ಪದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

    ಗೋಪನಕೊಪ್ಪದ ಶಿವರಾಜ (22) ಎಂಬಾತನೇ ಕೊಲೆಯಾದ ಯುವಕ, ಈತ ಗುರುವಾರ ಗೋಪನಕೊಪ್ಪದ ಕರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಶಿವರಾಜ ಹಾಗೂ ಸಂದೀಪ್ ಎಂಬ ಯುವಕರ ಜೊತೆಗೆ ಜಗಳ ಮಾಡಿಕೊಂಡಿದ್ದ.

    ಈ ಜಗಳವು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಆಗ ಅಲ್ಲೇ ಇದ್ದ ಕೆಲವರು ಇಬ್ಬರನ್ನು ತಡೆದು ಬುದ್ದಿ ಹೇಳಿ ಕಳುಹಿಸಿದ್ದರು. ಆದರೆ, ಶುಕ್ರವಾರ ರಾತ್ರಿ ಏಕಾಏಕಿ ಆತನ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.ಶಿವರಾಜ ಮನೆಯಲ್ಲಿ ಹಬ್ಬದ ನಿಮಿತ್ತ ಕುರಿಯನ್ನು ಕಡಿದು ಅಡುಗೆ ಮಾಡಲಾಗಿತ್ತು.   

     ಶುಕ್ರವಾರ ಮಧ್ಯಾಹ್ನದವರೆಗೂ ತನ್ನ ಸ್ನೇಹಿತರ ಜೊತೆ ಸೇರಿ ದೇವರಿಗೆ ನೈವಿದ್ಯ ಅರ್ಪಣೆ ಮಾಡಿ ತನ್ನ ಗೆಳೆಯರಿಗೆ ಊಟವನ್ನು ಮಾಡಿಸಿ ಕಳುಹಿಸಿದ್ದಾನೆ. ರಾತ್ರಿ 10 ಗಂಟೆಗೆ ಊಟವನ್ನು ಮಾಡಿ ಇಲ್ಲೇ ಹೊರಗಡೆ ಹೋಗಿ ಬರ್ತೀನಿ ಅಂತ ಹೇಳಿದ್ದವ ಮನೆ ಬಿಟ್ಟು ಹೋದ ಕೆಲವೇ ಕೆಲವು ನಿಮಿಷಗಳಲ್ಲಿ ಕೊಲೆಗೀಡಾಗಿದ್ದಾನೆ.

Recent Articles

spot_img

Related Stories

Share via
Copy link
Powered by Social Snap