ಬೆಂಗಳೂರು:
ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಈಗ 91ರ ಇಳಿ ವಯಸ್ಸು. ಶರೀರಿಕವಾಗಿ ಇತ್ತೀಚೆಗೆ ಕೊಂಚ ಕುಗ್ಗಿದಂತೆ ಕಂಡುಬಂದರೂ ಮಾನಸಿಕವಾಗಿ ಸದೃಢರಾಗಿದ್ದಾರೆ.
ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಸಂದರ್ಭದಲ್ಲಿ ನಾಡಿನ ಜನತೆಗೆ ಅವರು ವಿಶೇಷ ಸಂದೇಶ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ನಾನು 91ನೇ ವಯಸ್ಸಿನಲ್ಲಿದ್ದೇನೆ. ನಾನಿನ್ನೂ ಈ ಮಟ್ಟದಲ್ಲಿ ಉಳಿದುಕೊಳ್ಳಲು ನಿರಂತರ ಯೋಗ ಅಭ್ಯಾಸ ನನಗೆ ಸಹಾಯ ಮಾಡಿದೆ. ಎಲ್ಲರೂ ಯೋಗ ಮಾಡಿ, ಮಾನಸಿಕ ಮತ್ತು ದೈಹಿಕ ಫಿಟ್ನೆಸ್, ಕ್ಷೇಮ ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ