ನನ್ನ ರಾಜೀನಾಮೆ ವದಂತಿ ಸುಳ್ಳು : ಬಿರೇನ್‌ ಸಿಂಗ್‌

ಇಂಫಾಲ್:

     ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಶಾಸಕರೊಂದಿಗೆ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬುದು ಕೇವಲ ಊಹಾಪೋಹಗಳಾಗಿದ್ದು, ನಾವು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

    ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವರದಿಯ ಹಿನ್ನೆಲೆಯಲ್ಲಿ ಮಣಿಪುರ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ. “ಬಿರೇನ್ ಸಿಂಗ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಣಿವೆಯ ಎಲ್ಲಾ ಶಾಸಕರು ರಾಜೀನಾಮೆ ನೀಡುವ ಮೂಲಕ ರಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ ಕೈಗೊಂಡಿದ್ದಾರೆ ಎಂದು ವರದಿಯಾಗಿತ್ತು.

    ರಾಜೀನಾಮೆಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಮತ್ತು ಈ ವಿಷಯವನ್ನು ಚರ್ಚಿಸಲಾಗುತ್ತಿದೆ ಎಂದು ಮಣಿಪುರ ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ.

    “ನಮ್ಮ ಜನರನ್ನು ಮತ್ತು ರಾಜ್ಯವನ್ನು ರಕ್ಷಿಸಲು ನಾವು ಕಾಂಕ್ರೀಟ್ ನಿರ್ಧಾರವನ್ನು ತೆಗೆದುಕೊಳ್ಳಬೇಕು. ನಾವು ಆಡಳಿತವನ್ನು ಯಾರಿಗೆ ನೀಡುತ್ತೇವೆ ಎಂಬುದರ ಬಗ್ಗೆಯೂ ಯೋಚಿಸಬೇಕು” ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.

“ಈ ನಿರ್ದಿಷ್ಟ ವಿಷಯದಲ್ಲಿ ನಾವು ರಾಜಕೀಯ ಮಾಡಬಾರದು. ಪಟ್ಟಭದ್ರ ಹಿತಾಸಕ್ತಿಗಳ ಧ್ವನಿಗೆ ನಾವು ಕಿವಿಗೊಡಬಾರದು.. ನಾವು ಪರಿಸ್ಥಿತಿ ಏನಾಗಬಹುದು ಎಂದು ಯೋಚಿಸುತ್ತಿದ್ದೇವೆ. ನಾವು ಮುಖ್ಯವಾಗಿ ಜನರ ಜೀವನದ ಬಗ್ಗೆ ಚಿಂತಿಸುತ್ತಿದ್ದೇವೆ. ನಾವು ರಾಜೀನಾಮೆ ನೀಡಬಹುದು ಅಥವಾ ರಾಜೀನಾಮೆ ನೀಡದಿರಬಹುದು. ಆದರೆ ನಾವು ಗಂಭೀರವಾಗಿದ್ದೇವೆ” ಎಂದು ಸಿಂಗ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap