ನನ್ನ ಹೇಳಿಕೆ ತಪ್ಪಾಗಿದೆ, ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ – ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ಬೆಂಗಳೂರು :

ಬೆಂಗಳೂರಿನಲ್ಲಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗಜ್ಞಾನೇಂದ್ರ ಸ್ಪೋಟಕ ಮಾಹಿತಿಯನ್ನು ನೀಡಿದ್ದರು. ಆದ್ರೇ, ನಾನು ಹೇಳಿದಂತ ಹೇಳಿಕೆಯೇ ತಪ್ಪಾಗಿದೆ.ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂಬುದಾಗಿ ಇದೇಗ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನ ಜೆ.ಜೆ.ನಗರದಲ್ಲಿ ದಲಿತ ಯುವಕ ಚಂದ್ರುವನ್ನು ಕೊಲೆ ಮಾಡಿದ್ದಾರೆ. ಚಂದ್ರು ಉರ್ದು ಮಾತನಾಡಿಲ್ಲ ಎಂದು ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಹೇಳಿದ್ದರು.

ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ!

ಮೃತ ಚಂದ್ರ ಜೆಜೆ ನಗರಕ್ಕೆ ಬೈಕ್ ನಲ್ಲಿ ಸ್ನೇಹಿತ ಸೈಮನ್ ನನ್ನು ಕೂರಿಸಿಕೊಂಡು ಹೋಗಿದ್ದಾರೆ. ಈ ವೇಳೆ ಅಪರಿಚಿತರ ಯುವಕರ ಬೈಕ್ ಗೆ ಚಂದ್ರುವಿನ ಬೈಕ್ ತಗುಲಿದೆ. ಪರಿಣಾಮ, ಎರಡೂ ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಚಂದ್ರು ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಮಾಡಲಾಗಿದೆ ಘಟನೆ ಸಂಬಂಧ ನಾಲ್ವರು ಅರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಈ ಮೊದಲು ತಿಳಿಸಿದ್ದರು.

ಆದ್ರೇ ಇದೀಗ ಉಲ್ಟಾ ಹೊಡೆದಿರುವಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಕೊಲೆ ಬಗ್ಗೆ ಕಮೀಷನರಿಂದ ಮಾಹಿತಿ ಪಡೆದಿರುವೆ. ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ. ನನ್ನ ಹೇಳಿಕೆ ತಪ್ಪಾಗಿ, ತಕ್ಷಣದ ಮಾಹಿತಿ ಆಧಾರದ ಮೇಲೆ ಹೇಳಿದ್ದೇನೆ ಎಂಬುದಾಗಿ ತಮ್ಮ ಹೇಳಿಕೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

IPL 2022: ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್, ಆರೆಂಜ್ & ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link