ಮೈಸೂರಿನಲ್ಲಿ ಶಾಲೆ ಬಂದ್ ಗೆ ಡಿಸಿ ಸೂಚನೆ

ಮೈಸೂರು:

ಮೈಸೂರಿನಲ್ಲಿ ಮಕ್ಕಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು, ಪೋಷಕರು ಭೀತಿಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನು ಮನಗಂಡು ಮೈಸೂರು ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ ಅಂಗನವಾಡಿ, ನರ್ಸರಿ, 1ರಿಂದ 10ನೇ ತರಗತಿಯವರೆಗೆ ಭೌತಿಕ ತರಗತಿಗಳನ್ನು ಜ.12ರಿಂದ ಸ್ಥಗಿತಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

           ಈ ಅವಧಿಯಲ್ಲಿ ಆನ್ ಲೈನ್‌ನಲ್ಲಿ ತರಗತಿಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದೆ. ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆಯೊಂದಿಗೆ ಭೌತಿಕ ತರಗತಿಗಳನ್ನು ಮುಂದುವರೆಸುವಂತೆ ಸೂಚಿಸಿದ್ದಾರೆ.

ಇನ್ನೊಂದೆಡೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಮಂಗಳವಾರ 562 ಪ್ರಕರಣಗಳು ದಾಖಲಾಗಿವೆ. ಕಳೆದೊಂದು ವಾರದಿಂದ ಸೋಂಕು ಏರುಗತಿಯಲ್ಲೇ ಸಾಗುತ್ತಿದ್ದು, ಮಂಗಳವಾರ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 52 ಮಂದಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಇದುವರೆಗೆ 1,82,201 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ 32 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 1,77,904ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1868 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap