ಮೈಸೂರು :
ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ದಸರಾ ಮಹೋತ್ಸವ ಹಿನ್ನೆಲೆ ಮೆರವಣಿಗೆ ಮಾರ್ಗದಲ್ಲಿ 212 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಯಾವುದೇ ಅಹಿಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಡ್ರೋಣ್ ಕ್ಯಾಮರಾ ಮೂಲಕ ಹದ್ದಿನ ಕಣ್ಣು ಇರಿಸಲಾಗಿದೆ.
ಅಲ್ಲದೇ ಮೈಸೂರಿನಾದ್ಯಂತ ಒಟ್ಟು ಸಾರ್ವಜನಿಕರು ಅಳವಡಿಸಿರುವ 11,917 ಸಿಸಿ ಕ್ಯಾಮರಾಗಳ ದೃಶ್ಯಗಳ ಸಹಕಾರ ಪಡೆಯಲು ನಿರ್ಧಾರ ಮಾಡಲಾಗಿದ್ದು, ಅರಮನೆ ಹಾಗೂ ಬನ್ನಿಮಂಟಪ ಗೇಟ್‌ನಲ್ಲಿ ಬಾಡಿಗೆ ಕ್ಯಾಮರಾ ಇರುವ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರದಾದ್ಯಂತ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗೆ
ದಸರಾಗೆ 8407 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ