ದಸರಾ : ಇಂದು ರಾತ್ರಿಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ!!

ಮೈಸೂರು:

    ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.

     ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ತಾಲೀಮು ನಡೆಸಲಾಗುತ್ತಿದೆ. ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

    ಅ. 14ರ ಮಧ್ಯರಾತ್ರಿಯಿಂದ ಅ.18ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

    ದಸರಾ ಮುಗಿಯುವವರೆಗೂ 2 ಹಂತಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಇಂದು ಮಧ್ಯರಾತ್ರಿಯಿಂದ ಅ. 18ರ ಮಧ್ಯರಾತ್ರಿಯವರೆಗೆ ಮೊದಲ ಹಂತದಲ್ಲಿ ಮತ್ತು ಅ. 25ರ ಮುಂಜಾನೆಯಿಂದ ನ. 1ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ.

     ರಸ್ತೆ ಹಾಗೂ ಮೆಟ್ಟಿಲುಗಳ ಮಾರ್ಗ‌ದಿಂದ ಪ್ರವೇಶ ನಿಷೇಧಿಸಲಾಗಿದ್ದು, ಅ.17 ರಂದು ಗಣ್ಯರ ಹಾಗೂ ಅನುಮತಿ ಪಡೆದಿರುವ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ನಿಷೇಧಿತ ದಿನಗಳಲ್ಲಿ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

     ದಸರಾ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವುದರಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ಮುಂಜಾಗ್ರತಾ ದೃಷ್ಟಿಯಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link