ಮೈಸೂರು ಗ್ಯಾಂಗ್ ರೇಪ್ ಪ್ರಕರಣ ; ಆರೋಪಿಗಳು ಅರೆಸ್ಟ್!!!

ಮೈಸೂರು:

     ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ರೇಪ್​ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

      ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದಾರೆ.

     ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು.ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  

      ಆರೋಪಿಗಳನ್ನು ಸತ್ಯಮಂಗಲದಲ್ಲಿ ಅರೆಸ್ಟ್ ಮಾಡಲಾಗಿದ್ದು, ಅಲ್ಲಿನ ತಿರ್ಪೂರು ಸಮೀಪದ ಸ್ನೇಹಿತರು ಹಾಗೂ ಸಂಬಂಧಿಕರ ಮನೆಯಲ್ಲಿ ಆರೋಪಿಗಳು ಅವಿತು ಕುಳಿತುಕೊಂಡಿದ್ದರು. ಇದೀಗ ಅವರನ್ನು ಬಂಧಿಸಿ ಸತ್ಯಮಂಗಲದಿಂದ ಮೈಸೂರಿಗೆ ಕರೆತರಲಾಗಿದೆ. ಸದ್ಯ ನ್ಯಾಯಾಧೀಶರಿಂದ ಮೌಖಿಕ ಅನುಮತಿ ಪಡೆದಿರುವ ಪೊಲೀಸರು‌, ರಾತ್ರಿ ವೇಳೆಗೆ ಆರೋಪಿಗಳನ್ನು ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap