ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ!!

ಮೈಸೂರು:  

      ನಾಳೆಯಿಂದ ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆ ಹೊಸ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ.

     ಒಂದೇ ದಿನ ಎರಡು ವಿಷಯಗಳ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ. 

     ನಾಳೆಯ ಬದಲು ಸೆಪ್ಟೆಂಬರ್ 13ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಮುಂದೂಡಿಕೆ ಬಗ್ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್‌ ಅಧಿಕೃತ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯ. ಈಗಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಹ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್‌ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap