
ಮೈಸೂರು: ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ರೈತರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು. ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಕೆ.ಆರ್. ನಗರ ತಾಲೂಕಿನ ಕಂಚುಗಾರನ ಕೊಪ್ಪಲು ಗ್ರಾಮದಲ್ಲಿ ಬರ ವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿದ ಉಪಮುಖ್ಯಮಂತ್ರಿಗಳು, ಮಳೆ ಅಭಾವದಿಂದ ಉಂಟಾಗಿರುವ ಬೆಳೆ ನಷ್ಟ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದರು.
ಮಳೆ ಬಾರದ ಕಾರಣ ರಾಗಿ, ಜೋಳ, ಹೊಗೆಸೊಪುö್ಪ ಸೇರಿದಂತೆ ವಿವಿಧ ಬೆಳೆಗಳು ಮೊಳಕೆ ಹಂತದಲ್ಲೇ ಒಣಗಿ ನಾಶವಾಗಿರುವುದು ಬರದ ತೀವ್ರತೆಯನ್ನು ತೋರಿಸುತ್ತಿದೆ. ಜಿಲ್ಲೆಯಲ್ಲಿ ಬಿತ್ತನೆಯಾಗಿದ್ದ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಬರದಿAದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಅಗತ್ಯ ನೆರವು ಒದಗಿಸಲಿದೆ ಎಂದು ಅವರು ಭರವಸೆ ನೀಡಿದರು. ಬೆಳೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎನ್‌ಡಿಆರ್‌ಎಫ್ ಅಡಿ ಹೆಚ್ಚಿನ ಪರಿಹಾರ ದೊರೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ ಇರುವ ಎನ್‌ಡಿಆರ್‌ಎಫ್ ನಿಯಮಗಳನ್ನು ಸಡಿಲಗೊಳಿಸಿ, ಬರದಿಂದ ತೀವ್ರವಾಗಿ ಬಾಧಿತವಾಗಿರುವ ಹೆಚ್ಚಿನ ತಾಲೂಕುಗಳಿಗೂ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬರ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಸಚಿವ ಜಿ.ಪರಮೇಶ್ವರ್?, ರಾಜ್ಯದ ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಮಾಡಬೇಕು. ಹಾಗಾಗಿ ೧೦೧ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಆಗ ಈ ವರ್ಗಕ್ಕೆ ಸೇರುವ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ತಿಳಿಸಿದರು.
ಇನ್ನೆರಡು ವಾರದೊಳಗೆ ಕೇಂದ್ರಕ್ಕೆ ಸಮಗ್ರ ಬರ ವರದಿಯನ್ನು ಸಲ್ಲಿಸುತ್ತೇವೆ. ಆ ಬಳಿಕ ಕೇಂದ್ರದ ತಂಡಗಳು ಬಂದು ಪರಿಶೀಲನೆ ನಡೆಸಿ, ನಂತರವಷ್ಟೇ ಪರಿಹಾರ ಬಿಡುಗಡೆಯಾಗುತ್ತದೆ. ಅದರ ಮೊದಲು ನಮಗೆ ಯಾವುದೇ ಪರಿಹಾರ ಹಣವನ್ನು ನಮಗೆ ಕೊಡುವುದಿಲ್ಲ ಎಂದರು.
ಜೋಳಕ್ಕೆ ಬಿಳಿಸುಳಿ ರೋಗ ಬಂದಿದೆ. ಆ ರೋಗ ಇನ್ಶೂರೆನ್ಸ್ನಲ್ಲಿ ಕವರ್ ಆಗಲ್ಲ. ಹಾಗಾಗಿ ಇನ್ಶೂರೆನ್ಸ್ ಕಂಪನಿಯವರೊAದಿಗೆ ಮಾತನಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಯತ್ನ ಮಾಡಬೇಕು. ಇದನೆಲ್ಲ ತಿಳಿದುಕೊಳ್ಳಲೆಂದೇ ಇಂದು ನಾನು ಬರವೀಕ್ಷಣೆಗೆ ಬಂದಿರುವುದಾಗಿ ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಅಂತಾರಾಷ್ಟಿçÃಯ ಹವಾಮಾನ ವರದಿಯ ಪ್ರಕಾರ, ಸೆಪ್ಟೆಂಬರ್ ನಲ್ಲಿ ಒಂದನೇ ವಾರ ಅಥವಾ ಎರಡನೇ ವಾರದಲ್ಲಿ ಮಳೆ ಕಂಪ್ಲೀಟ್ ಆಗಿ ನಿಂತು ಹೋಗುತ್ತದೆ ಎಂಬ ಮಾಹಿತಿ ಇದೆ. ಎಲ್ ನಿನೋದಿಂದಾಗಿ ೧೨೩ ವರ್ಷಗಳ ಬಳಿಕ ಈ ಪರಿಸ್ಥಿತಿ ಇದೆ. ಮಳೆ ಬರುತ್ತದೆ ಎಂದು ಹೇಳಲು ಆಗವುದಿಲ್ಲ. ಹೀಗಾಗಿ ರೈತರಿಗೆ ಮುಂದೆ ಯಾವ ರೀತಿ ಸಹಾಯ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದರು.
ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ತಂಬಾಕು ಸಸ್ಯ ಬೆಳೆಯುತ್ತಾರೆ. ಆದರೆ, ಈ ಬಾರಿ ಹುಣಸೂರು ತಾಲೂಕಿನಲ್ಲೇ ೧೬ ಸಾವಿರಕ್ಕೂ ಹೆಚ್ಚು ಹೇಕ್ಟರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ, ವಾಣಿಜ್ಯ ಬೆಳೆಗಳಿಗೆ ಪರಿಹಾರ ಇಲ್ಲ. ಹೀಗಾಗಿ ಇದಕ್ಕೆ ರಾಜ್ಯ ಸರ್ಕಾರದ ಪರಿಹಾರವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇಂದು ನಾನು ಬರವೀಕ್ಷಣೆ ಮಾಡಿದ ಬಳಿಕ ಈ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಸಂಪುಟದಲ್ಲಿ ಚರ್ಚೆ ಮಾಡಿ ರೈತರಿಗೆ ಏನು ಸಹಾಯ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಒಂದು ತಾಲ್ಲೂಕಿನಲ್ಲಿ ೧೬ ಸಾವಿರ ಹೆಕ್ಟೇರ್ ನಷ್ಟ ಆಗಿದೆ ಎಂದರೆ, ಪಕ್ಕದ ೬ ತಾಲ್ಲೂಕುಗಳಲ್ಲಿಯೂ ಇದುವೇ ಪರಿಸ್ಥಿತಿ ಇದೆ. ಹೀಗಾಗಿ ಈ ಕುರಿತು ಚರ್ಚೆ ಮಾಡುತ್ತೇವೆ ಎಂದರು.
ಹುಣಸೂರು ತಾಲ್ಲೂಕಿನ ಕಂದಾಯ ಇಲಾಖೆಯ ಕಟ್ಟಡಗಳು ಸೋರುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಕುರಿತು ಪ್ರಸ್ತಾವನೆ ಬಂದಿದ್ದರೆ ಅದನ್ನು ಪರಿಶೀಲನೆ ಮಾಡಿ ಮುಂದೆ ನೂತನ ಕಟ್ಟಡವನ್ನು ನಿರ್ಮಿಸಲು ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಈ ವೇಳೆ ಹುಣಸೂರು ಶಾಸಕ ಹರೀಶ್‌ಗೌಡ, ಕೆ.ಆರ್.ನಗರ ಶಾಸಕ ರವಿಶಂಕರ್, ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ ಹಾಗೂ ತಹಶೀಲ್ದಾರ್ ಮತ್ತು ಕೃಷಿ ಅಧಿಕಾರಿಗಳು ಇದ್ದರು.
ಮೋಡ ಬಿತ್ತನೆ ಬಗ್ಗೆ ಡಿಸಿಎಂ ಅಭಿಮತ
ಮೋಡ ಬಿತ್ತನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೋಡ ಬಿತ್ತನೆ ಮಾಡಲು ಆದೇಶ ಕೊಟ್ಟಿದ್ದಾರೆ. ಈ ಬಗ್ಗೆ ನಮ್ಮ ಟೆಕ್ನಿಕಲ್ ತಂಡದವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಎಷ್ಟರ ಮಟ್ಟಿಗೆ ಸಹಾಯ ಆಗುತ್ತದೆ ಎಂಬುದನ್ನು ನೋಡಬೇಕು. ಟೆಕ್ನಿಕಲ್ ವರದಿಯ ಪ್ರಕಾರ ಹೆಚ್ಚು ಮಳೆ ಬರುವುದಿಲ್ಲ. ಅದು ತುಂತುರು ಮಳೆ ಬಂದ ಹಾಗೆ ಬರುತ್ತದೆ. ಜೊತೆಗೆ ಅದು ಬೆಳೆಗಳಿಗೆ ಸಾಕಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಇದನ್ನು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಇಂದು ಗದಗದಲ್ಲಿ ಬರವೀಕ್ಷಣೆ ಮಾಡುತ್ತಿದ್ದಾರೆ. ನಾನು ಇಲ್ಲಿ ವೀಕ್ಷಣೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಆದೇಶದಂತೆ ಎಲ್ಲ ಸಚಿವರು ತಮಗೆ ನಿಯೋಜಿಸಿರುವ ಜಿಲ್ಲೆಗಳ ಬರ ವೀಕ್ಷಣೆ ನಡೆಸುತ್ತಿದ್ದಾರೆ. ಆನಂತರ ಎಲ್ಲವನ್ನೂ ಒಟ್ಟಾಗಿ ಪರಿಶೀಲಿಸಿ, ರೈತರಿಗೆ ಯಾವ ರೀತಿಯಲ್ಲಿ ಸಹಾಯ ಮಾಡಬೇಕು, ಇನ್ಶೂರೆನ್ಸ್ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ.
ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ








