ಚಿತ್ರದುರ್ಗ
ಎನ್.ವೈ. ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರಮಾರ (ಮಾರ್ಚ್ 31) ಬೆಳಗ್ಗೆ 11.30 ರ ವೇಳೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್.ವೈ. ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಹಂತದ ಪಟ್ಟಿಯಲ್ಲಿ ಎನ್.ವೈ. ಗೋಪಾಲಕೃಷ್ಣ ಅವರ ಹೆಸರು ಕೇಳಿಬರುತ್ತಿದೆ.
ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ಗೋಪಾಲಕೃಷ್ಣ ನಾಲ್ಕು ಬಾರಿ ಶಾಸಕರಾಗಿ ಹೊರಹೊಮ್ಮಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆ ಆಗಿ, ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ