ಗೋದಾವರಿ-ಕೃಷ್ಣಾ-ಕಾವೇರಿ ನದಿ ಜೋಡಣೆ: ಕೇಂದ್ರ ಸಚಿವರ ಜತೆ ಎಚ್.ಡಿ. ದೇವೇಗೌಡ ಚರ್ಚೆ

ನವದೆಹಲಿ: 

   ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್  ಅವರೊಂದಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿಗಳು, ಸಚಿವರ ಜತೆ ಮುಖ್ಯವಾಗಿ ರಾಜ್ಯಕ್ಕೆ ಸಂಬಂಧಪಟ್ಟ ಅಂತಾರಾಜ್ಯ ನೀರಾವರಿ ವಿವಾದಗಳು, ರಾಜ್ಯ ಎದುರಿಸುತ್ತಿರುವ ಜಲ ಸಂಕಷ್ಟ, ರಾಜ್ಯದ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವ ವಿಷಯಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು.

   ಮಾಜಿ ಪ್ರಧಾನಿಗಳ ಬೇಡಿಕೆಗಳ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಶಕ್ತಿ ಸಚಿವರು, ಈ ಬಗ್ಗೆ ತಾವೇ ಖುದ್ದು ಪರಿಶೀಲನೆ ನಡೆಸುವುದಾಗಿ ತಿಳಿಸಿದರು.  

   ಅಲ್ಲದೆ, ರಾಜ್ಯದ ಜಲ ವಿವಾದಗಳ ಬಗ್ಗೆ ಸಚಿವರು ಮಾಜಿ ಪ್ರಧಾನಿಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಅಲ್ಲದೆ, ಗೋದಾವರಿ – ಕೃಷ್ಣಾ – ಕಾವೇರಿ ನದಿಗಳ ಜೋಡಣೆಯ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಬೇಕು ಎಂದು ದೇವೇಗೌಡ ಅವರು ಮಾಡಿರುವ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದರು.

Recent Articles

spot_img

Related Stories

Share via
Copy link