ಕಾರ್ಯಾಚರಣೆಗೆ ಸಿದ್ದವಾಯ್ತು ನಾಗಸಂದ್ರ ಮಾದಾವರ ಮೆಟ್ರೋ ….!

ಬೆಂಗಳೂರು

  ನಮ್ಮ ಮೆಟ್ರೋ ನಾಗಸಂದ್ರ ಟು ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧವಾಗಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ. ನಮ್ಮ ಮೆಟ್ರೋದ ವಿಸ್ತರಿತ ಯೋಜನೆಯಾದ ನಾಗಸಂದ್ರ ಹಾಗೂ ಮಾದಾವರ ಮಾರ್ಗ ಉದ್ಘಾಟನೆಗೆ ಸಿದ್ದವಾಗಿದೆ. 3.14 ಕಿಮೀ ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರ ನಡುವೆ ಮೂರು ನಿಲ್ದಾಣಗಳಿದ್ದು, ಮಂಜುನಾಥ ನಗರ, ಚಿಕ್ಕಬಿದರಕಲ್ಲು, ಮಾದಾವರ ಹೊಸದಾಗಿ ಹಸಿರು ಮಾರ್ಗಕ್ಕೆ ಸೇರ್ಪಡೆಯಾಗಲಿದೆ. ಒಂದು ವಾರದೊಳಗೆ ಉದ್ಘಾಟನಾ ಸಮಾರಂಭ ನಡೆಯುವ ನಿರೀಕ್ಷೆ ಇರುವುದರಿಂದ ನಿಲ್ದಾಣಗಳನ್ನ ಸುಸಜ್ಜಿತಗೊಳಿಸಲಾಗುತ್ತಿದೆ.

   ಈಗಾಗಲೇ ಮೂರು ಮೆಟ್ರೋ ಸ್ಟೇಷನ್​ಗಳು ಉದ್ಘಾಟನೆಗೆ ಸಿದ್ದವಾಗಿದ್ದು ಸಿವಿಲ್, ಪೇಂಟಿಂಗ್, ಸ್ಟೇಷನ್ ಕೆಲಸ ಸೇರಿದಂತೆ ಎಲ್ಲವೂ ಮುಗಿದಿದೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ. ಕೇಂದ್ರ ಸರ್ಕಾರ ಗ್ರೀನ್ ಕೊಟ್ಟಿದ್ದೇ ಆದಲ್ಲಿ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ.
   ಒಟ್ಟಿನಲ್ಲಿ ಈ ಮಾರ್ಗದ ಮೆಟ್ರೋಗೆ ಈಗಾಗಲೇ ರೈಲ್ವೆ ಸುರಕ್ಷತಾ ಆಯುಕ್ತರು ಅನುಮತಿ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಕೇಂದ್ರದ ಅನುಮತಿಗೆ ಪತ್ರ ಬರೆದಿದ್ದು, ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ ಕೊಡುವ ನಿರೀಕ್ಷೆ ಇದ್ದು, ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗುವುದು ಖಚಿತವಾಗಿದೆ.

Recent Articles

spot_img

Related Stories

Share via
Copy link