ಕೇರಳ :
ಸದ್ಯ ದೇಶದ ಪ್ರಾಣಿ ದಯಾ ಸಂಘಗಳು ಮತ್ತು ಪ್ರಾಣಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಆನೆ ಹತ್ಯೆ ದುರಂತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ .
ಈ ಬಗ್ಗೆ ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಗರ್ಭಿಣಿ ಆನೆ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಮೂಕ ಪ್ರಾಣಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಗರ್ಭಿಣಿ ಆನೆಯ ಸಾವು ನಮಗೂ ನೋವು ತಂದಿದೆ. ಅನೇಕರು ಈ ಸಂಬಂಧ ನಮ್ಮ ಪರಿಗಣನೆಗೆ ತರುವ ಕೆಲಸ ಮಾಡಿದ್ದೀರಿ. ಈ ವಿಚಾರವನ್ನ ದ್ವೇಷ ರಾಜಕಾರಣಕ್ಕೆ ಬಳಸಿರುವುದ ನೋವಾಗಿದೆ. ನಾವು ಅನ್ಯಾಯವನ್ನ ಎಂದು ಸಹಿಸುವುದಿಲ್ಲ. ಆದರೆ ಈ ವಿಚಾರದಲ್ಲಿ ಸತ್ಯ ಬಿಟ್ಟು ಏನೆಲ್ಲಾ ಹಬ್ಬಿಸಿದ್ದರು ಎಂದು ಸಿಎಂ ವಿಜಯನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ