ನಲಪಾಡ್ ಮೇಲೆ ಮತ್ತೊಂದು ಅರೋಪ : ಕೆಂಗೇರಿ ಪೊಲೀಸರು ಹೇಳಿದ್ದೇನು …?

ಬೆಂಗಳೂರು

    ನಲಪಾಡ್ ಯೂತ್ ಕಾಂಗ್ರೆಸ್  ಹೆಸರೇಳಿಕೊಂಡು ವಿದ್ಯಾರ್ಥಿಗೆ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ  9 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೆಲ ಕಿಡಿಗೇಡಿಗಳು ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್  ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್  ಮಾಡಿ ಆತನ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ. ಸದ್ಯ ಈಗ ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

   ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್​ಗೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

    ಜೀವನ್​ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಜೊತೆಗೆ ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಹಾಕಿದ್ದಾರೆ. ಆ ಬಳಿಕ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಹಣ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಸಾಲ ಕೊಟ್ಟು ಹೆಚ್ಚು ಬಡ್ಡಿ ಹಾಕಿ ಕಿರುಕುಳ ನೀಡಿದ್ದಾರೆ ಎಂದು ಯುವಕ ಜೀವನ್ ಆರೋಪ ಮಾಡಿದ್ದಾರೆ.

   ಇನ್ನು ಜೀವನ್​​ನನ್ನು ಪದೆ ಪದೇ ಹೋಟೆಲ್​ಗೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಆರು ಲಕ್ಷ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಅಂತ ಕಿರುಕುಳ ನೀಡಿದ್ದಾರೆ. ಸದ್ಯ ದೂರಿನಲ್ಲಿ ಒಂಬತ್ತು ಜನರ ವಿರುದ್ಧ ಕಿಡ್ನಾಪ್ ಹಾಗೂ ಸುಲಿಗೆ ಮಾಡಿರೋ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

 

Recent Articles

spot_img

Related Stories

Share via
Copy link
Powered by Social Snap