ಬಾಗಲಕೋಟೆ:
ದಕ್ಷಿಣಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಿಗೇ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರು ನಮಾಜ್ ಸಲ್ಲಿಸಿದ ಪ್ರಕರಣ ಬಹಿರಂಗಗೊಂಡಿದೆ.
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಈ ಪ್ರಕರಣ ನಡೆದಿದೆ.
ಇಲ್ಲಿನ ಶಾಲಾ ಕೊಠಡಿಯ ವರಾಂಡಾದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ನಮಾಜ್ ಸಲ್ಲಿಸಿದ್ದಾರೆ.
ಶಿಕ್ಷಕರ ಗಮನಕ್ಕೆ ಬಾರದಂತೆ ಆರು ವಿದ್ಯಾರ್ಥಿನಿಯರು ಶಾಲಾ ಆವರಣದಲ್ಲಿ ನಮಾಜ್ ಮಾಡಿದ್ದಾರೆ. ಈ ಕುರಿತ ವಿಡಿಯೋ ಈಗ ವೈರಲ್ ಆಗುತ್ತಿದೆ. ಹಿಜಾಬ್-ಕೇಸರಿ ಸಂಘರ್ಷದ ಜತೆಗೆ ಈಗ ನಮಾಜ್ ಕೂಡ ಸೇರಿಕೊಳ್ಳುತ್ತಿರುವುದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಆತಂಕ ಉಂಟುಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ