ಶಿವಮೊಗ್ಗ:
ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಜನಪ್ರತಿನಿಧಿಗಳ ನಿಯೋಗ ಮನವಿ ಪತ್ರ ಅರ್ಪಿಸಿದೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರ ಹೆಸರು ಉಳಿಯಲು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕಾಗಿದೆ.
ಈ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಡಿ.ಎಸ್. ಅರುಣ್ ಹಾಗೂ ಇತರರು ನಿಯೋಗದಲ್ಲಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ