ನಮ್ಮ ಮೆಟ್ರೋ ಮತ್ತೊಂದು ದುರಂತ : ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

ಬೆಂಗಳೂರು:

   ನಮ್ಮ ಮೆಟ್ರೋ ಕಾಮಗಾರಿ ವೇಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ. 

  ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದರೆ ಆಟೋದಲ್ಲಿದ್ದ ಪ್ಯಾಸೆಂಜರ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

   ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಬೃಹತ್ ಗಾತ್ರದ ವಯಾಡೆಕ್ಟ್ (ಸಿಮೆಂಟ್ ಗೋಡೆ) ಕೊಂಡೊಯ್ಯಲಾಗುತ್ತಿತ್ತು. ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂಡಾಗಿದೆ. ಪರಿಣಾಮ ವಯಾಡೆಕ್ಟ್ ನೆಲಕ್ಕುರುಳಿದೆ. 

   ಇದೇ ಸಂದರ್ಭದಲ್ಲಿ ಲಾರಿ ಪಕ್ಕದಲ್ಲೇ ಇದ್ದ ಆಟೋ ಮೇಲೆ ವಯಾಡೆಕ್ಟ್ ಬಿದ್ದಿದೆ. ಲಾರಿ ತುಂಡಾಗಿ ವಯಾಡೆಕ್ಟ್ ಬೀಳುತ್ತಿದ್ದಂತೆ ಆಟೋದಲ್ಲಿದ್ದ ಪ್ಯಾಸೆಂಜರ್ ತಕ್ಷಣಕ್ಕೆ ಇಳಿದು ಓಡಿಹೋಗಿದ್ದಾರೆ, ಆದ್ರೆ, ಚಾಲಕ ಇಳಿಯುವಷ್ಟರಲ್ಲಿ ಆಟೋ ಮೇಲೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಸಹ ಸಂಪೂರ್ಣ ಅಪ್ಪಚ್ಚಿಯಾಗಿದೆ.

Recent Articles

spot_img

Related Stories

Share via
Copy link