ಬೆಂಗಳೂರು :
ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ಜುಲೈ 1 ರಿಂದ ವಿಸ್ತರಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಜುಲೈ 1ರಿಂದ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ವ್ಯವಸ್ಥೆ ಇರುತ್ತದೆ. ಈ ಹಿಂದೆ ಬೆಳಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ನಮ್ಮ ಮೆಟ್ರೋ ಸಂಚಾರ ಇತ್ತು. ಆದರೆ ಇದು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಇರುತ್ತದೆ. ವೀಕೆಂಡ್ ಕರ್ಫೂ ಇನ್ನೂ ಜಾರಿಯಲ್ಲಿರುವುದರಿಂದ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 5 ನಿಮಿಷದಿಂದ 15 ನಿಮಿಷಗಳ ಅಂತರದಲ್ಲಿ ಕಾರ್ಯಾಚರಣೆಗೊಳ್ಳಲಿದೆ.
ಇದೇ ವೇಳೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ಮಾಡಬಹುದು. ಗುರುವಾರದಿಂದ ನಮ್ಮ ಮೆಟ್ರೋದ ಎಲ್ಲ ಸ್ಟೇಷನ್ ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ಲಾಕ್‌ಡೌನ್‌ನಿಂದಾಗಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು, ಕೆಲವೇ ದಿನಗಳ ಹಿಂದೆ ಪುನರಾರಂಭಿಸಲಾಗಿದ್ದು, ಇದೀಗ ಸಂಚಾರದ ಅವಧಿಯನ್ನು ಕೂಡ ವಿಸ್ತರಿಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ