ಚಿಕ್ಕಬಳ್ಳಾಪುರ :
ನಂದಿ ಗಿರಿಧಾಮದ ಗುಡ್ಡಗಳು ಕುಸಿದಿರುವ ಹಿನ್ನೆಲೆಯಲ್ಲಿ ನಂದಿಗಿರಿಧಾಮದಲ್ಲಿ ಒಂದು ವಾರ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ, ಆಗಸ್ಟ್ 24) ರಾತ್ರಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದರಲ್ಲದೆ ವಿಶ್ವ ವಿಖ್ಯಾತ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಮಣ್ಣುಗುಡ್ಡ ಕುಸಿದು ಸುಮಾರು 10 ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದು ಸಂಪೂರ್ಣವಾಗಿ ಮುಚ್ಚಿಹೋಗಿದೆ.
ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಾಪಸ್ ಕಳುಹಿಸಲಾಗುತ್ತಿದೆ.
ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆಯಾಗಿದ್ದರಿಂದ, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಗುಡ್ಡ ಕುಸಿತದಿಂದ ಗಿರಿಧಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಸಂಚಾರಕ್ಕೆ ಪೂರಕವಾಗಿ ಮಾಡಲು ಒಂದು ವಾರ ಸಮಯ ಬೇಕಾಗುತ್ತದೆ ಎನ್ನಲಾಗಿದೆ. ಆದ್ದರಿಂದ ಒಂದು ವಾರ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ