ನವದೆಹಲಿ
ಜನಪ್ರಿಯ ಡೈರಿ ಬ್ರಾಂಡ್ ಅಮುಲ್ ಹಾಲಿನ ದರ ಕೂಡ ಎರಡು ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಮೇ 1ರಿಂದಲೇ ಜಾರಿಗೆ ಬರುತ್ತಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ತಿಳಿಸಿದೆ. ಇದರೊಂದಿಗೆ, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬೆಲೆ ಏರಿಕೆ ಹೊಡೆತ ತಟ್ಟಿದಂತಾಗಲಿದೆ.
ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್ಟ್ರಿಮ್, ಅಮುಲ್ ಚಾಯ್ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ಗಳಿಗೆ ಅನ್ವವಾಗುತ್ತದೆ.ಕಳೆದ ವರ್ಷವಷ್ಟೇ ಗ್ರಾಹಕರಿಗೆ ರಿಲೀಫ್ ನೀಡಲು ಅಮುಲ್ ಸುಮಾರು ಐದು ತಿಂಗಳ ಕಾಲ 1 ಲೀಟರ್ ಮತ್ತು 2 ಲೀಟರ್ ಹಾಲಿನ ಪ್ಯಾಕ್ಗಳಲ್ಲಿ ಕ್ರಮವಾಗಿ 50 ಮಿಲಿ ಮತ್ತು 100 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ನೀಡಿತ್ತು. ಇದಲ್ಲದೆ, 2025 ರ ಜನವರಿಯಲ್ಲಿ, 1 ಲೀಟರ್ ಪ್ಯಾಕ್ನ ಬೆಲೆಯನ್ನು 1 ರೂ. ಕಡಿಮೆ ಮಾಡಿತ್ತು.
