ಬೆಂಗಳೂರು :
ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಸೂಚನೆ ನೀಡಿದೆ.
ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
