ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ….!

 ಬೆಂಗಳೂರು

    ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ

    ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಹಾಲಿನ ಹೊಸ ದರ ಹೇಗಿದೆ.?
ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
ಶುಭಂ ಹಾಲು 48ರಿಂದ 50 ರೂ
ಸಮೃದ್ದಿ ಹಾಲು 51ರಿಂದ 53ರೂ
ಶುಭಂ (ಟೋನ್ಡ್ ಹಾಲು) 49ರಿಂದ 51ರೂ
ಸಂತೃಪ್ತಿ ಹಾಲು 55 ರಿಂದ 57 ರೂ
ಶುಭಂ ಗೋಲ್ಡ್ ಹಾಲು 49ರಿಂದ 51ರೂ
ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

ದರ ಏರಿಕೆಗೆ ಕಾರಣಗಳೇನು..?

    15% ಹಾಲು ಸಂಗ್ರಹ ಹೆಚ್ಚಳ ಆಗಿದೆ, ಇದನ್ನ ಮಾರಾಟ ಮಾಡುವ ದೃಷ್ಟಿಯಿಂದ ಪ್ರತಿ ಪ್ಯಾಕೇಟ್ ಗೆ  50 ಎಂಎಲ್ ಹೆಚ್ಚುವರಿ ಹಾಲನ್ನ ಪ್ಯಾಕೇಟ್ ನಲ್ಲಿ ನೀಡಲಿದ್ದೇವೆ ಹಾಗಾಗಿ ಹೆಚ್ಚುವರಿ ಹಾಲು ನೀಡಿ 2 ರೂ ಹೆಚ್ಚಳ ಮಾಡುತ್ತಿದ್ದೇವೆ ಇದು ದರ ಏರಿಕೆ ಅಲ್ಲ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link