ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ ಹೀಗಾಗಿ ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ನಂದಿನಿ ತಯಾರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಿಂದೆ ತಿರುಪತಿಗೆ ಯಾಕೆ ತುಪ್ಪ ಪೂರೈಸುತ್ತಿಲ್ಲ ಎಂದು ಕೇಳುತ್ತಿದ್ದರು. ಇಂದು ತಿಮ್ಮಪ್ಪನ ಕೃಪೆಯಿಂದ ಹೆಚ್ಚು ತುಪ್ಪ ಪೂರೈಕೆ ಮಾಡುತ್ತಿದ್ದೇವೆ. ಇದು ಕೆಎಂಎಫ್ನ ಹೆಮ್ಮೆಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಜಿಪಿಎಸ್ ವಿಶೇಷತೆ?
- ಟಿಟಿಡಿಗೆ ಕೆಎಂಎಫ್‌ನಿಂದ ಸರಕು ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ.
- ತುಪ್ಪ ಇರುವ ಟ್ಯಾಂಕರ್‌ಗೆ ಜಿಪಿಎಸ್ ಸ್ಕ್ಯಾನರ್ ಲಾಕ್ ಅಳವಡಿಕೆ.
- ಇಲ್ಲಿ ಟ್ಯಾಂಕರ್ ಒಮ್ಮೆ ಲಾಕ್ ಆದ್ರೆ ಟಿಟಿಡಿಯಲ್ಲಿಯೇ ಓಪನ್ ಮಾಡಲು ಅವಕಾಶ.
- ಟಿಟಿಡಿಯಲ್ಲಿ ಓಪನ್ ಮಾಡಬೇಕು ಅಂದ್ರೆ ಪಾಸ್ ವರ್ಡ್ ಕಡ್ಡಾಯ.
- ಟ್ಯಾಂಕರ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಕೆಎಂಎಫ್ ಅಧಿಕಾರಿಗಳಿಗೆ ಒಟಿಪಿ ರವಾನೆ.
- ಒಟಿಪಿ ನಂಬರ್ ಹೇಳಿದ್ರೆ ಮಾತ್ರ ಓಪನ್ ಆಗಲಿರುವ ತುಪ್ಪದ ಟ್ಯಾಂಕರ್.
ಇಷ್ಟೊಂದು ಎಚ್ಚರಿಕೆ ಯಾಕೆ?
ಇನ್ನು ತಿರುಪತಿಗೆ ತುಪ್ಪ ಸರಬರಾಜು ಮಾಡುವ ಟ್ಯಾಂಕರ್‌ಗಳಿಗೆ ಏಕೆ ಜಿಪಿಎಸ್ ಟ್ರ್ಯಾಕರ್ ಅಳವಡಿಕೆ ಮಾಡಲಾಗುತ್ತಿದೆ ಎನ್ನುವುದುನ್ನು ನೋಡುವುದಾದರೆ, ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಮಿಕ್ಸ್ ಮಾಡಲಾಗಿದೆ ಎನ್ನುವ ಅಂಶ ವರದಿಯಿಂದ ತಿಳಿದುಬಂದಿದೆ, ಆದ್ರೆ, ಈ ಹಿಂದಿನ ಜಗನ್ ಸರ್ಕಾರ ಆರೋಪವನ್ನು ಅಲ್ಲಗೆಳೆದಿದೆ. ಇದೀಗ ಇಂತಹ ಆರೋಪಗಳು ಮುಂದೆ ಕೆಎಂಎಫ್ ತುಪ್ಪದ ಮೇಲೆ ಬರಹುದು ಎನ್ನುವ ಕಾರಣಕ್ಕೆ ಮುಂಜಾಗ್ರತೆಗಾಗಿ ಈ ಕ್ರಮ ಅನುಸರಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಾರ್ಗ ಮಧ್ಯ ತುಪ್ಪದ ಟ್ಯಾಂಕರ್ ನಿಲ್ಲಿಸಿ ರಾಜಕೀಯ ಲಾಭಕ್ಕಾಗಿ ಏನಾದರೂ ಕಲಬೆರಿಕೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಕೆಎಂಎಫ್ ಈ ಮುಂಜಾಗ್ರತೆ ವಹಿಸಿದೆ.
