ಕೋಮುಲ್ ನೇಮಕಾತಿಯಲ್ಲಿ ಹಗರಣ: ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಸೇರಿದ ಆಸ್ತಿ ಇಡಿ ಜಪ್ತಿ!

ಬೆಂಗಳೂರು:

   ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) 2023ರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಸೇರಿದ ರೂ. 1.32 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.

   ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ನಂಜೇಗೌಡ ಅವರು ಕೋಮುಲ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಮುಲ್ ನಲ್ಲಿ 81ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗಿತ್ತು. ಆದರೆ, ಶಾಸಕ ಕೆ.ವೈ ನಂಜೇಗೌಡ ನೇತೃತ್ವದ ಸಮಿತಿಯು ಕೆಲವು ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟು ಅವರಿಂದ ರೂ. 30 ಲಕ್ಷ ಹಣ ಪಡೆಯಲಾಗಿದೆ ಎಂದು ಇಡಿ ಆರೋಪಿಸಿದೆ.

  ನಂಜೇಗೌಡ ಅವರಿಗೆ ಸೇರಿದ ರೂ. 1.32 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ತಾತ್ಕಾಲಿಕ ಆದೇಶ ಹೊರಡಿಸಿದೆ. 150 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಕಾಯ್ದೆ 2002 ರಡಿ ಇಡಿ ಅಧಿಕಾರಿಗಳು ಜನವರಿ 8 ರಂದು ಶೋಧ ಕಾರ್ಯಾಚರಣೆ ನಡೆಸಿದ್ದರು. ತದನಂತರ ಇಡೀ ಕೋಮುಲ್ ನೇಮಕಾತಿ ಹಗರಣವನ್ನು ತನಿಖೆಗೆ ಕೈಗೆತ್ತಿಕೊಂಡಿತ್ತು.

Recent Articles

spot_img

Related Stories

Share via
Copy link