ಬೆಂಗಳೂರು
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ಮರು ಮತ ಎಣಿಕೆಗೆ ಸೂಚನೆ ನೀಡಿದೆ. ಇನ್ನು ಇದೇ ವೇಳೆ ನಂಜೇಗೌಡ ಪರ ವಕೀಲೆ ನಳಿನಾ ಮಾಯಗೌಡ ಅವರು ಈ ತೀರ್ಪಿಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಸಹ ಪುರಸ್ಕರಿಸಿ 1 ತಿಂಗಳುಗಳ ಕಾಲ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಇದರಿಂದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.






