ಸರ್ಕಾರದ ವತಿಯಿಂದ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು

      ಸರ್ಕಾರ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶ ಹೊರಡಿಸಿದೆ. ಕಾರ್ಕಳ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

     ಸಚಿವರು ತಮ್ಮ ಟ್ವೀಟ್‌ನಲ್ಲಿ ಈಡಿಗ-ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮಹತ್ವದ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.

     ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿಯಲ್ಲಿ ಈಡಿಗ-ಬಿಲ್ಲವ ಸಮುದಾಯದ ಸರ್ವ ತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ.

Recent Articles

spot_img

Related Stories

Share via
Copy link
Powered by Social Snap