ಫಿಕ್ಸ್‌ ಆಯ್ತು ಮೋದ ಪ್ರಮಾಣ ವಚನದ ಮುಹೂರ್ತ….!

ನವದೆಹಲಿ: 

    ಜೂನ್ 9ಕ್ಕೆ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ದೆಹಲಿಯ ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್​ನ​ಲ್ಲಿ ಎನ್​ಡಿಎ ಸಂಸದರು ನಡೆಸಿದರು. ಈ ಸಭೆಯಲ್ಲಿ ಸಂಸದ ಪ್ರಲ್ಹಾದ್​ ಜೋಶಿ ಅಧಿಕೃತವಾಗಿ ಘೋಷಿಸಿದರು.

    240 ಬಿಜೆಪಿ ಸಂಸದರೊಂದಿಗೆ, ಟಿಡಿಪಿ, ಜೆಡಿಯು, ಶಿವಸೇನೆ, ಲೋಕಜನಶಕ್ತಿ (ರಾಮವಿಲಾಸ್), ಎನ್‌ಸಿಪಿ, ಜೆಡಿಎಸ್, ಜನಸೇನೆ, ಅಪ್ನಾ ದಳ ಮತ್ತು ಇತರ ಮಿತ್ರಪಕ್ಷಗಳ ಸಂಸದರು, ಎನ್‌ಡಿಎ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೋದಿ ನಾಯಕತ್ವವನ್ನು ಬೆಂಬಲಿಸಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದರು.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಚಾಣಕ್ಯ ಅಮಿತ್ ಶಾ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು, ಬಿಹಾರ್ ಸಿಎಂ ನಿತೀಶ್ ಕುಮಾರ್​ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

    ಜೂನ್​ 4ರಂದು ಪ್ರಕಟವಾದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ​ಎನ್​ಡಿಎ ಮೈತ್ರಿಕೂಟ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇತ್ತೀಚೆಗೆ ನಡೆದ ಮೈತ್ರಿಕೂಟದ ನಾಯಕರು ಸಭೆ ಸೇರಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇದೀಗ ಜೂನ್​ 9ಕ್ಕೆ ಈ ಪ್ರಮಾಣವಚನ ಸಮಾರಂಭಕ್ಕೆ ಮುಹೂರ್ತ ನಿಗದಿಯಾಗಿದೆ.

    ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್​ 9ರಂದು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ಭೂತಾನ್, ಶ್ರೀಲಂಕಾ, ನೇಪಾಳ ಮತ್ತು ಮಾರಿಷಸ್‌ ದೇಶದ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ

Recent Articles

spot_img

Related Stories

Share via
Copy link
Powered by Social Snap