ನವದೆಹಲಿ:
ಲಡಾಖ್ ಸಂಘರ್ಷದಲ್ಲಿ ಭಾರತದ 20 ಯೋಧರನ್ನು ಕೊಂದ ಚೀನಾದೊಂದಿಗೆ ಮಾತುಕತೆ ಸಾಧ್ಯವಾದರೆ ಪಾಕಿಸ್ತಾನದ ಜೊತೆಗೇಕಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.ಗೃಹ ಬಂಧನದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, 20 ಜನ ಯೋಧರ ಸಾವಿಗೆ ಕಾರಣವಾದ ಲಡಾಖ್ ಗಡಿ ತಕರಾರು ಇತ್ಯರ್ಥಕ್ಕೆ ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ಸಾಧ್ಯವಾದರೆ, ನೆರೆಯ ಮತ್ತೊಂದು ದೇಶ(ಪಾಕಿಸ್ತಾನ)ದೊಂದಿಗೆ ಏಕೆ ಸಾಧ್ಯವಿಲ್ಲ?… ಕಣಿವೆಯಲ್ಲಿನ ಹಿಂಸಾಚಾರ ತಗ್ಗಿಸಲು ಪಾಕಿಸ್ತಾನದೊಂದಿಗೆ ರಾಜತಾಂತ್ರಿಕ ಮಾತುಕತೆಗಳನ್ನು ಆರಂಭಿಸಬೇಕು.
ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದ್ದು, ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಇದು ಸಾಧ್ಯ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ