ಭೂಪಾಲ್:
ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಜ್ವರ, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ಜೂನ್ 11 ರಂದು ಅವರನ್ನು ಲಖನೌ
ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಲಾಲ್ ಜಿ ಟಂಡನ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಅಶುತೋಷ್ ಟಂಡನ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.ಲಾಲ್ ಜಿ ಟಂಡನ್ ಅವರು ಯಕೃತ್ತಿನ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಅವರನ್ನು ವೆಂಟಿಲೇಟರ್ ನಲ್ಲಿಡಲಾಗಿದೆ ಎಂದು ಮೆದಾಂತ್ ಆಸ್ಪತ್ರೆಯ ನಿರ್ದೇಶಕ ಪ್ರೊ. ರಾಕೇಶ್ ಕಪೂರ್ ಸೋಮವಾರ ಹೇಳಿಕೆ ನೀಡಿದ್ದರು.
ಲಾಲ್ ಜಿ ಟಂಡನ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ