ಕೊರೋನಾ ಸಂಕಷ್ಟದಲ್ಲೂ ಕೆಟ್ಟ ರಾಜಕೀಯ ಮಾಡುತ್ತಿದೆ ಬಿಜೆಪಿ : ಕಪಿಲ್ ಸಿಬಲ್

ನವದೆಹಲಿ:

      ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ ಏಕೆಂದರೆ ನಮ್ಮ ಅಶ್ವಶಾಲೆಗಳಿಂದ(ರಾಜ್ಯ ಘಟಕಗಳಿಂದ ) ಕುದುರೆಗಳು(ಶಾಸಕರು) ಹೊರಗೆ ಬಂದ ನಂತರ ನಾವು ಎಚ್ಚೆತ್ತು ಕೊಳ್ಳುವುದೇ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರಸ್ ಪಕ್ಷದ ರಾಜ್ಯ ಘಟಕಗಳಿಗೆ ಪ್ರಶ್ನೆ ಮಾಡಿದ್ದಾರೆ.

      ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ, ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡಿ ತಮ್ಮತ್ತ ಸೆಳೆಯಲು ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಆರೋಪ ಮಾಡಿದ್ದು ರಾಜಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಕುರಿತು ಕಪಿಲ್ ಸಿಬಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

    ಮಾನವೀಯತೆಯನ್ನು ಮೀರಿ ಬಿಜೆಪಿ ನಾಯಕರು ನಡೆದುಕೊಳ್ಳುತ್ತಿದ್ದಾರೆ ದೇಶದಲ್ಲಿ ಕೊರೋನಾ ಸಂಕಷ್ಟದ ನಡುವೆ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅಶೋಕ್ ಗೆಹ್ಲೊಟ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಗೆಹ್ಲೊಟ್ ಆರೋಪವನ್ನು ಬಿಜೆಪಿ ನಿರಾಕರಿಸಿದ್ದು, ಕಾಂಗ್ರೆಸ್ ತನ್ನ ಒಳ ಬಿಕ್ಕಟ್ಟನ್ನು ಶಮನಗೊಳಿಸಲು ವಿಫಲವಾಗಿ, ರಾಜ್ಯದಲ್ಲಿ ಕೊರೋನಾ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೆ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link