ನವದೆಹಲಿ:
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಗಾಳಿಗಿಂತ ವೇಗವಾಗಿ ಹರಡುತ್ತಿರುವ ಬೆನ್ನಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಸೃಷ್ಠಿಯಗುತ್ತಿವೆ ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಶಾಲೆ, ಕಾಲೇಜುಗಳು ಸಧ್ಯಕ್ಕೆ ಆರಂಭಿಸುವ ಆಲೋಚನೆ ಇಲ್ಲಾ ಎಂದಿದೆ .
ಶಾಲಾ ಪ್ರಾರಂಭದ ಗೊಂದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿರುವ ಕೇಂದ್ರ ಅಗಸ್ಟ್ ಬಳಿಕವಷ್ಟೇ ಪುನರಾರಂಭಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದೆ. ಶಾಲೆ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳುತ್ತಿದ್ದು, ಜುಲೈನಿಂದ ಶಾಲೆ ಕಾಲೇಜುಗಳು ಶೇಕಡಾ 30% ಹಾಜರಾತಿಯೊಂದಿಗೆ ಬೆಳಗ್ಗೆ ಮತ್ತು ಸಂಜೆಯ ಕ್ಲಾಸ್‍ಗಳು ಆರಂಭವಾಗಲಿದೆ. ಅಲ್ಲದೇ ಹಸಿರು ಕಿತ್ತಳೆ ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಶುರುವಾಗಲಿದೆ. ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು . ಆದರೆ ಶಾಲೆ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸದ್ಯ ಅನುಮತಿ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.