ನವದೆಹಲಿ:
20ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿಪಡೆದಿದ್ದ ಗಲ್ವಾನ್ ಕಣಿವೆ ಸಂಘರ್ಷಕ್ಕೆ ಅಲ್ಪ ವಿರಾಮ ದೊರೆತಂತಾಗಿದೆ ಅದು ಏನೆಂದರೆ ಚೀನಾ ಸೇನೆ ವಿವಾದಿತ ಸ್ಥಳದಿಂದ ಕಾಲ್ಕಿತ್ತಿದೆ ಎಂದು ವರದಿಯಾಗಿದೆ.
ಸೇನಾ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಗಲ್ವಾನ್ ಕಣಿವೆಯಲ್ಲಿ ಮೊಕ್ಕಾಂ ಹೂಡಿದ್ದ ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸುಮಾರು 1 ರಿಂದ 2 ಕಿ.ಮೀ ನಷ್ಚು ಹಿಂದಕ್ಕೆ ಹೋಗಿದೆ. ಅಲ್ಲದೆ ವಿವಾದಿತ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತನ್ನ ಸೇನೇ ಟೆಂಟ್ ಗಳನ್ನೂ ಕೂಡ ಸ್ಥಳಾಂತರ ಮಾಡಿದೆ ಎಂದು ತಿಳಿಸಿದೆ.
ಈ ಹಿಂದೆ ಗಲ್ವಾನ್ ಸಂಘರ್ಷದ ಬಳಿಕ ಉಭಯ ದೇಶಗಳ ಸೇನಾಧಿಕಾರಿಗಳ ನಡುವಿನ ಮಾತುಕತೆ ಫಲಪ್ರದವಾಗಿದ್ದು, ಚೀನಾ ಸೇನೆ ಮಾತ್ರವಲ್ಲದೇ ಭಾರತೀಯ ಸೇನೆ ಕೂಡ ವಿವಾದಿತ ಪ್ರದೇಶದಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ನೀಡಿತ್ತು. ಇದರ ಮೊದಲ ಹಂತವಾಗಿ ಚೀನಾ ಸೇನೆ 2 ಕಿ.ಮೀ ಹಿಂದಕ್ಕೆ ಸರಿದಿದ್ದು, ವಿವಾದಿತ ಸ್ಥಳದಲ್ಲಿ ನಿರ್ಮಿಸಲಾಗಿದ್ದ ತನ್ನ ಟೆಂಟ್ ಗಳನ್ನು ಸ್ಥಳಾಂತರ ಮಾಡಿದೆ.
ಜೂನ್ ತಿಂಗಳಲ್ಲಿ ನಡೆದಿದ್ದ ಉಭಯ ದೇಶಗಳ ನಡುವಿನ ಸೇನಾ ಸಂಘರ್ಷ ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿತ್ತು. ಅಲ್ಲದೆ ಭಾರತ ಸರ್ಕಾರ ಚೀನಾದ ಆ್ಯಪ್ ಗಳನ್ನು ನಿಷೇಧ ಮಾಡಿತ್ತು. ಅಲ್ಲದೆ ಸರ್ಕಾರಿ ಕಾಮಕಾರಿಗಳಲ್ಲಿ ಚೀನಾ ಸಹಭಾಗಿತ್ವವನ್ನು ರದ್ದು ಮಾಡಿದ್ದಲ್ಲದೇ, ಚೀನಾ ಮೂಲದ ಸಂಸ್ಥೆಗಳಿಂದ ಪಡೆಯುತ್ತಿದ್ದ ಬಿಡಿಭಾಗಗಳನ್ನೂ ಮತ್ತು ಇತರೆ ವಸ್ತುಗಳ ಆಮದಿನ ಮೇಲೂ ನಿಷೇಧ ಹೇರಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
