ಮತ್ತುಷ್ಟು ಚೇತರಿಕೆ ಕಂಡ ಪ್ರಣಾಬ್ ಮುಖರ್ಜಿ ಆರೋಗ್ಯ..!

ನವದೆಹಲಿ:

     ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬರುತ್ತಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿ  ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಭಿಜಿತ್ ಅವರು, ನಿಮ್ಮೆಲ್ಲರ ಹಾರೈಕೆ ಹಾಗೂ ಪ್ರಾರ್ಥನೆ, ವೈದ್ಯರ ಪ್ರಾಮಾಣಿಕ ಪರಿಶ್ರಮದಿಂದ ತಂದೆಯ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬರುತ್ತಿದೆ. ಇದೀಗ ನನ್ನ ತಂದೆ ಆರೋಗ್ಯ ಸ್ಥಿರವಾಗಿದೆ. ದೇಹದ ಉಷ್ಣಾಂಶ, ರಕ್ತದೊತ್ತಡ, ನಾಡಿಮಿಡಿತ, ಹೃದಯ ಬಡಿತ ಎಲ್ಲವೂ ನಿಯಂತ್ರಣದಲ್ಲಿದೆ. ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡುಬಂದಿವೆ. ಆದಷ್ಟು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಮತ್ತಷ್ಟು ಪ್ರಾರ್ಥನೆ ಸಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. 

     ಇನ್ನು ಆಸ್ಪತ್ರೆಯ ವೈದ್ಯರು ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಕುರಿತು ಹೇಳಿಕೆ ನೀಡಿದ್ದು, ಪ್ರಣಬ್ ಮುಖರ್ಜಿಯವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸುತ್ತಿದೆ. ಕೃತಕ ಉಸಿರಾಟದ ಬೆಂಬಲವನ್ನು ಮುಂದುವರೆ ಸಲಾಗುತ್ತಿದೆ. ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap