ನವದೆಹಲಿ:
ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅಪಾಯಕಾರಿ ಸಮುದಾಯಕ್ಕೆ ಹರಡುವ ಹಂತ ತಲುಪುವ ಆತಂಕ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಇದೇ ದೃಷ್ಟಿಕೋನವನ್ನು ಹೊಂದಿಲ್ಲ ಎಂದು ದೆಹಲಿ ಆಮ್ ಆದ್ಮಿ ಸರ್ಕಾರ ಮಂಗಳವಾರ ಹೇಳಿದೆ.
ದೆಹಲಿಯಲ್ಲಿ ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದೆ, ಜುಲೈ ಮಧ್ಯದ ವೇಳೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಸುಮಾರು 2.25 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಅತಿ ಹೆಚ್ಚು ಪೀಡಿತ ದೇಶದ ನಗರಗಳಲ್ಲಿ ದೆಹಲಿಯೂ ಒಂದಾಗಬಹುದು ಮತ್ತು ಮುಂದಿನ ತಿಂಗಳ ಅಂತ್ಯದ ವೇಳೆಗೆ ಪ್ರಕರಣಗಳ ಸಂಖ್ಯೆ 5.5 ಲಕ್ಷ ತಲುಪುವ ಸಾಧ್ಯತೆ ಇದೆ. ಹಾಗ ಸುಮಾರು 80,000 ಬೆಡ್ ಗಳು ಬೇಕಾಗುತ್ತದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








