ಹೊಸ ವಿವಾದ ಮೈಮೇಲೆ ಎಳೆದುಕೊಂಡ ಸುನಿಲ್ ಗವಾಸ್ಕರ್..!

ದುಬೈ:

       ವಿರಾಟ್ ಕೊಹ್ಲಿ ಅವರನ್ನು ವ್ಯಂಗ್ಯ ಮಾಡುವ ಭರದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

     ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ  ನಡೆದ ರಾಯಲ್ ಚಾಲೆಂಜರ್ಸ್-ಕಿಂಗ್ಸ್‌ ಇಲೆವೆನ್ ಪಂಜಾಬ್‌ ನಡುವಿನ ಪಂದ್ಯದಲ್ಲಿ ಕಾಮೆಂಟರಿ ನೀಡುತ್ತಿದ್ದ ಸುನಿಲ್ ಗವಾಸ್ಕರ್ ಕೊಹ್ಲಿ ಕುರಿತು ನೀಡಿದ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಕಮೆಂಟರಿ ವೇಳೆ ಗವಾಸ್ಕರ್ ಅವರು ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಅವರ ವಿಚಾರ ಮಾತನಾಡಿದ್ದು ಮಾತ್ರವಲ್ಲದೇ ಅವರ ಕುರಿತಂತೆ ಅಶ್ಲೀಲವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. 

     ಕಿಂಗ್ಸ್‌ ಇಲೆವೆನ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಒಂದಿಷ್ಟು ತಪ್ಪುಗಳನ್ನು ಮಾಡಿದ್ದರು. ಮುಖ್ಯವಾಗಿ ಪಂಜಾಬ್‌ ಅಪಾಯಕಾರಿ ಆಟಗಾರ, ನಾಯಕ ಕೆಎಲ್ ರಾಹುಲ್ ಅವರ ಕ್ಯಾಚ್ ಅನ್ನು ಎರಡೆರಡು ಬಾರಿ ಕೈಚೆಲ್ಲಿದ್ದರು. ಇದೇ ಬೆಂಗಳೂರಿ ಗೆಲುವಿಗೆ ಮುಳುವಾಯಿತು. ಬಳಿಕ ಬ್ಯಾಟಿಂಗ್ ವೇಳೆ ಕ್ರೀಸ್ ಗೆ ಬಂದ ಕೊಹ್ಲಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ವಿರಾಟ್ ಕೊಹ್ಲಿ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದರು.
 
    ಕೊಹ್ಲಿಯಿಂದ ಎರಡೆರಡು ಬಾರಿ ಜೀವದಾನ ಪಡೆದ ಕನ್ನಡಿಗ, ಮೂಲತಃ ಮಂಗಳೂರಿನವರಾದ ರಾಹುಲ್ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದರು. 69 ಎಸೆತಗಳಲ್ಲಿ 14 ಫೋರ್ಸ್, 7 ಸಿಕ್ಸರ್ ಸೇರಿ 132 ರನ್ ಚಚ್ಚಿದರು. ಹೀಗಾಗಿ ಪಂಜಾಬ್ 206 ರನ್ ಕಲೆ ಹಾಕಿತ್ತು. ಈ ಬೃಹತ್ ಗುರಿ ಬೆನ್ನಟ್ಟಿದ ಆರ್‌ಸಿಬಿ ನೀರಸ ಬ್ಯಾಟಿಂಗ್‌ನೊಂದಿಗೆ 109 ರನ್‌ ಸೇರಿಸಿ 97 ರನ್‌ನಿಂದ ಸೋತಿತು.

 

     ಆಗ ಕಾಮೆಂಟರಿ ನೀಡುತ್ತಿದ್ದ ಸುನಿಲ್ ಗವಾಸ್ಕರ್ ಕೊಹ್ಲಿಯನ್ನು ಟೀಕಿಸುವ ಭರದಲ್ಲಿ ಅನುಷ್ಕಾ ಕುರಿತು ಮಾತನಾಡಿದ್ದರು. ‘Inhone lockdown me to bas Anushka ki gendon ki practice ki hai’  ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap