ನವದೆಹಲಿ:
ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ನ್ಯಾಯಾಂಗ ನಿಂದನೆಯ ಪ್ರಯತ್ನವಾಗಿದ್ದು,ವಿಜಯ್ ಮಲ್ಯ ತಪಿತಸ್ಥನೆಂದು ಕೋರ್ಟ್ ತೀರ್ಪು ನೀಡಿತ್ತು.ಈ ಪ್ರಕರಣ ಸಂಬಂಧ ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಯುಯು ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಮಲ್ಯರ ವಿರುದ್ಧ ಎರಡು ಆರೋಪಿಗಳಿದ್ದು, ಆಸ್ತಿ ವಿವರ ಹಾಗೂ ಹೊರಗಿನ ಹಣದ ಬಗ್ಗೆ ಮಾಹಿತಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ