ಮುಂಬೈ:
ದೇಶದಲ್ಲಿ ತೀವ್ರ ಸಂಚಲನ ಮೂಡಿಸಿರುವ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಯವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ.
“ರಿಯಾ ಮತ್ತು ಶೋಯಿಕ್ ಚಕ್ರವರ್ತಿ ಅವರು ಎನ್‌ಡಿಪಿಎಸ್ ಪ್ರಕರಣದಲ್ಲಿ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಇದು ಸೆಪ್ಟೆಂಬರ್ 23 ರಂದು ವಿಚಾರಣೆಗೆ ಬರಲಿದೆ. ವಿಚಾರಣೆಯ ನಂತರ ಅರ್ಜಿಗಳ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದು ರಿಯಾ ಸೋದರನ ಪರ ವಕೀಲ ಸತೀಶ್ ಮನೆಶಿಂಧೆ ತಿಳಿಸಿದ್ದಾರೆ. .








