ನವದೆಹಲಿ:
ಕಾಂಗ್ರೆಸ್ ನಾಯಕ ,ಹಿರಿಯ ರಾಜಕಾರಣಿ ಹಾಗು ಮಾಜಿ ಕೇಂದ್ರ ಸಚಿವ ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ.ಒಂಬತ್ತು ಬಾರಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ರಶೀದ್ ವಿಪಿ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.
ಕೊರೋನಾ ಪಾಸಿಟಿವ್ ಇದ್ದ ಹಿನ್ನೆಲೆ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೃದಯ, ಮೂತ್ರಪಿಂಡ ಕಾಯಿಲೆಗಳಿಂದಲೂ ಬಳಲಿದ್ದ ರಶೀದ್ ಅವರಿಗೆ ಕೊರೋನಾದಿಂದ ಚೇತರಿಸಿಕೊಂಡ ನಂತರವೂ ಚಿಕಿತ್ಸೆ ಮುಂದುವರಿದಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಿಗ್ಗೆ ರೂರ್ಕಿಯಲ್ಲಿ ನಿಧನರಾಗಿದ್ದಾರೆ.
ಉತ್ತರ ಪ್ರದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ರಶೀದ್ ಐದು ದಶಕಗಳ ರಾಜಕೀಯ ಪ್ರಯಾಣದಲ್ಲಿ ಅನೇಕ ಜವಾಬ್ದಾರಿಯುತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು 2012 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
