ಕೊಚ್ಚಿ:
ಸಧ್ಯದ ಪರಿಸ್ಥಿಯಲ್ಲಿ ವಿವಾದದ ಕೇಂದ್ರ ಬಿಂದುವಾಗಿರುವ ಶಬರಿಮಲೆ ದೇವಸಸ್ಥಾನಕ್ಕೆ ಪ್ರವೇಶಿಸಲು ಯತ್ನಿಸಿ ವಿಫಲವಾಗಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಕಿಸ್ ಆಫ್ ಲವ್ ಆಯೋಜಕಿ ರೆಹಾನಾ ಫಾತಿಮಾಗೆ ತಾನು ಕೆಲಸ ಮಾಡುತ್ತಿದ್ದ ಕೇಂದ್ರ ಸರ್ಕಾರದ ಬಿಎಸ್ ಎನ್ ಎಲ್ ದೊಡ್ಡ ಪ್ರಮಾಣದಲ್ಲಿ ಆಘಾತ ನೀಡಿದೆ.
ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯುತ್ತಿದ್ದಂತೆ ಪ್ರವೇಶಿಸಲು ಮುಂದಾದ ರೆಹಾನಾ ಫಾತಿಮಾ ಅವರನ್ನು ಬಿಎಸ್ ಎನ್ ಎಲ್ ಸಂಸ್ಥೆ ಅವರನ್ನು ಕೆಲಸದಿಂದ ಅಮಾನತು ಮಾಡುವ ಮೂಲಕ ದೊಡ್ಡ ಪ್ರಮಾಣದಲ್ಲಿ ಶಾಕ್ ನೀಡಿದೆ.
ಶಬರಿಮಲೆ ಪ್ರವೇಶದ ಕುರಿತಂತೆ ಫೇಸ್ ಬುಕ್ ಪೋಸ್ಟ್ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ರೆಹಾನಾ ಫಾತಿಮಾ ಬಂಧನಕ್ಕೀಡಾಗಿದ್ದು, ಇದರ ಬೆನ್ನಲ್ಲೇ ಬಿಎಸ್ ಎನ್ ಎಲ್ ಸಂಸ್ಥೆ ಕೂಡ ಆಕೆಯನ್ನು ಕೆಲಸದಿಂದ ಅಮಾನತು ಮಾಡಿದೆ.