ಭೋಪಾಲ್
ಮುಖ್ಯಮಂತ್ರಿ ಕಮಲನಾಥ್‌ಗೆ ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬೀತು ಮಾಡಿ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ. 22 ಶಾಸಕರ ರಾಜೀನಾಮೆ ಬಳಿಕ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ.ಮಾರ್ಚ್ 16ರ ಸೋಮವಾರ ಮಧ್ಯಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲ ಲಾಲ್‌ಜಿ ಥಂಡನ್ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಬಹುಮತವನ್ನು ಕಮಲನಾಥ್ ಸಾಬೀತು ಮಾಡಬೇಕು.
ರಾಜ್ಯಪಾಲರು ಈ ಕುರಿತು ಮುಖ್ಯಮಂತ್ರಿಗಳ ಕಚೇರಿಗೂ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ವಿಶ್ವಾಸ ಮತ ಸಾಬೀತು ಮಾಡುವ ಪ್ರಕ್ರಿಯೆಯನ್ನು ಮುಂದೂಡಬಾರದು, ಸ್ಥಗಿತಗೊಳಿಸಬಾರದು. ಸೋಮವಾರ ಪ್ರಕ್ರಿಯೆ ನಡೆಯಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ