ಶ್ರೀನಗರ:

ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿಸಿದ್ದಾರೆ
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಶೇಷ ಕಾರ್ಯಾಚರಣೆ, ಸಿಆರ್’ಪಿಎಫ್, ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು.
ಗುಂಡಿನ ದಾಳಿ ಬಳಿಕ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಮಾರ್ಪಟ್ಟಿದ್ದು, ಎನ್’ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಸ್ಥಳ ಸೇನೆ ವಶದಲ್ಲಿದೆ, ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
